Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:18 - ಕನ್ನಡ ಸತ್ಯವೇದವು C.L. Bible (BSI)

18 ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಾದರೆ ನನಗಾಗುವ ಬಹುಮಾನವೇನು? ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನ ಮಾಡುವ ಹಕ್ಕನ್ನು ನಡಿಸದೆ ಅದನ್ನು ಉಚಿತಾರ್ಥವಾಗಿ ದಾನಮಾಡುವದೇ ನನಗೆ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಜಾಲ್ಯಾರ್ ಮಾಜೊ ಪಗಾರ್ ಕಾಯ್? ಬರ್‍ಯಾ ಖಬ್ರೆಚ್ಯಾ ಕಾಮಾಕ್ನಿ ಬರಿ ಖಬರ್ ಮಾಕಾ ದಿತಾ ತ್ಯಾ ಹಕ್ಕಾಕ್ನಿ ಮಿಯಾ ವಾಪ್ರಿನಸ್ತಾನಾ, ತಿ ಫುಕೊಟ್ ಮಿಯಾ ಪ್ರಚಾರ್ ಕರ್‍ತಾ. ಹ್ಯೊ ಅವ್ಕಾಸುಚ್ ಮಾಜೊ ಪಗಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:18
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ಆದರೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸುವಾಗ ದುರ್ಬಲಮನಸ್ಸುಳ್ಳ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿರಿ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು