1 ಕೊರಿಂಥದವರಿಗೆ 9:21 - ಕನ್ನಡ ಸತ್ಯವೇದವು C.L. Bible (BSI)21 ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖಾಯ್ದ್ಯಾಂಚ್ಯಾ ಖಾಯ್ಲ್ ನಸಲ್ಲ್ಯಾಕ್ನಿ ಕಮ್ವುನ್ ಘೆವಸಾಟ್ನಿ ಖಾಯ್ದ್ಯಾಂಚ್ಯಾ ಖಾಯ್ಲ್ ನಸಲ್ಲ್ಯಾಂಚ್ಯಾ ಸಾರ್ಕೆ ಮಿಯಾ ಹೊಲೊ, ತಸೆ ಮಟ್ಲ್ಯಾರ್ ದೆವಾಚೆ ಖಾಯ್ದೆ ನಸ್ತಾನಾ ಮಿಯಾ ಹಾಂವ್ ಮನುನ್ ನ್ಹಯ್, ಖರೆಚ್ ಮಿಯಾ ಕ್ರಿಸ್ತಾಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹಾಂವ್. ಅಧ್ಯಾಯವನ್ನು ನೋಡಿ |
ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”