Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:25 - ಕನ್ನಡ ಸತ್ಯವೇದವು C.L. Bible (BSI)

25 ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದರಲ್ಲಿ ಹೋರಾಡುವವರೆಲ್ಲರು ಎಲ್ಲಾ ವಿಷಯಗಳಲ್ಲಿ ವಿುತವಾಗಿರುತ್ತಾರೆ. ಅವರು ಬಾಡಿಹೋಗುವ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖೆಳಾತ್ ಭಾಗ್ ಘೆತಲೊ ಹರ್ ಎಕ್ಲೊ ಖೆಳ್ಗಾಡಿ ಸಗ್ಳ್ಯಾ ವಿಶಯಾತ್ ಮಿತ್ ಸಂಬಾಳ್ತಾ. ಸರುನ್ ಜಾತಲೆ ಎಕ್ ಭೊಮಾನ್ ಕಮ್ವುಸಾಟಿ ತೊ ಎವ್ಡೊ ತರಾಸ್ ಘೆತಾ; ಖರೆ ಅಮಿ ಕನ್ನಾಚ್ ಸರಿ ನಸಲ್ಲೆ ಭೊಮಾನ್ ಘೆವ್ಕ್ ಸಾಟ್ನಿ ಅಶೆ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:25
18 ತಿಳಿವುಗಳ ಹೋಲಿಕೆ  

ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.


ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು