Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:27 - ಕನ್ನಡ ಸತ್ಯವೇದವು C.L. Bible (BSI)

27 ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ದುಸ್ರ್ಯಾಕ್ನಿ ಮಿಯಾ ಖೆಳುಕ್ ಬಲ್ವಲ್ಲ್ಯಾ ಮಾನಾ ಮಿಯಾಚ್ ಉಪ್ಕಾರಾಕ್ ಪಡಿನಸಲ್ಲೊ ಹೊಯ್ನ್ ಮನ್ತಲ್ಯಾ ಭಿಂಯಾನ್ ಮಾಜ್ಯಾ ಆಂಗಾಕ್ ಮಿಯಾ ತರಾಸ್ ದಿತಾ ಅನಿ ಮಾಜ್ಯಾ ಹತೊಟಿಕ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:27
23 ತಿಳಿವುಗಳ ಹೋಲಿಕೆ  

ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”


ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು