Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:9 - ಕನ್ನಡ ಸತ್ಯವೇದವು C.L. Bible (BSI)

9 “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ,” ಎಂದು ಮೋಶೆಯ ಧರ್ಮಶಾಸ್ತ್ರದಲ್ಲೇ ಲಿಖಿತವಾಗಿದೆ. ಇಲ್ಲಿ ದೇವರಿಗೆ ಎತ್ತಿನ ಮೇಲೆ ಚಿಂತೆಯೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂದು ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಕಣ ತುಳಿಯುವ ಎತ್ತು ಧಾನ್ಯ ತಿನ್ನದಂತೆ ಅದರ ಬಾಯನ್ನು ಕಟ್ಟಬೇಡಿ” ಎಂದು ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಹೀಗೆ ಹೇಳಿದಾಗ, ಕಣತುಳಿಯುವ ಎತ್ತಿನ ಬಗ್ಗೆ ಮಾತ್ರ ಆತನು ಆಲೋಚಿಸುತ್ತಿದ್ದನೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,” ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮೊಯ್ಜೆಚ್ಯಾ ಖಾಯ್ದ್ಯಾತ್ನಿಚ್ ಅಶೆ ಲಿವಲ್ಲೆ ಹಾಯ್: “ಖಳ್ಯಾತ್ ಧಾನೆ ಮಳ್ತಾನಾ ಬೈಲಾಚ್ಯಾ ತೊಂಡಾಕ್ ಮುಸ್ಕೆ ಭಾಂದುನಕಾಸಿ” ಹೆ ಬೈಲಾಂಚ್ಯಾ ಕಾಳ್ಜಿಸಾಟ್ನಿ ದೆವಾನ್ ಅಶೆ ಮಟ್ಲ್ಯಾನ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:9
14 ತಿಳಿವುಗಳ ಹೋಲಿಕೆ  

“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.”


‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?


ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ.


ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು