Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:1 - ಕನ್ನಡ ಸತ್ಯವೇದವು C.L. Bible (BSI)

1 ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಮ್ಮ ರಕ್ಷಕನಾದ ದೇವರಿಂದಲೂ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ನೇವಿುಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ಮನ್ತಲೊ ಮಿಯಾ ಲಿವ್ತಲಿ ಚಿಟ್. ಅಮ್ಚೊ ರಾಕ್ವಾಲಿ ದೆವ್ ಅನಿ ಅಮ್ಚೊ ಬರೊಸೊ ಹೊವ್ನ್ ಹೊತ್ತ್ಯಾ ಜೆಜು ಕ್ರಿಸ್ತಾಚ್ಯಾ ಹುಕುಮಾ ವೈನಾ ಮಿಯಾ ತೆಚೊ ಅಪೊಸ್ತಲ್ ಹೊವ್ನ್ ಹಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:1
38 ತಿಳಿವುಗಳ ಹೋಲಿಕೆ  

ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.


ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು