Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:12 - ಕನ್ನಡ ಸತ್ಯವೇದವು C.L. Bible (BSI)

12 ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12-13 ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12-13 ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಯಾ ಮಾಜ್ಯಾ ಧನಿಯಾ ಜೆಜು ಕ್ರಿಸ್ತಾಕ್ ಧನ್ಯವಾದ್ ದಿತಾ. ತೆನಿ ಮಾಜ್ಯಾ ಕಾಮಾಕ್ನಿ ಬಳ್ ದಿಲಾ, ತೆಕಾ ಮಿಯಾ ಧನ್ಯವಾದ್ ದಿತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ವಿಶ್ವಾಸಾಚೊ ಮಾನುಸ್ ಮನುನ್ ಘೆವ್ನ್ ಅಪ್ಲ್ಯಾ ಸೆವೆಸಾಟ್ನಿ ಮಾಕಾ ಎಚುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:12
26 ತಿಳಿವುಗಳ ಹೋಲಿಕೆ  

ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು