Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:13 - ಕನ್ನಡ ಸತ್ಯವೇದವು C.L. Bible (BSI)

13 ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಧನಿಯಾನ್ ಅಪ್ಲಿ ಕುರ್ಪಾ ಮಾಜ್ಯಾ ವೈರ್ ಲೈ ಕರುನ್ ವೊತ್ಲ್ಯಾನ್, ಅದ್ದಿ ಕ್ರಿಸ್ತಾಚಿ ನಿಂದ್ಯಾ ಕರ್ತಲ್ಯಾ ಮಾಕಾ ವಿಶ್ವಾಸ್ ಅನಿ ಪ್ರೆಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:13
25 ತಿಳಿವುಗಳ ಹೋಲಿಕೆ  

ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು