Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:15 - ಕನ್ನಡ ಸತ್ಯವೇದವು C.L. Bible (BSI)

15 ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜು ಕ್ರಿಸ್ತ್ ಹ್ಯಾ ಜಗಾತ್ ಪಾಪಿ ಲೊಕಾಕ್ನಿ ಬಚಾವ್ ಕರುಕ್ ಮನುನ್ ಯೆಲ್ಲೊ ಮನ್ತಲಿ ಗೊಸ್ಟ್ ಖರಿ ಅನಿ ಹೆ ಸಗ್ಳ್ಯಾ ರಿತಿನ್ ವಿಶ್ವಾಸ್ ಕರುಕುಚ್ ಪಾಜೆ: ಸಗ್ಳ್ಯಾಂಚ್ಯಾನಿಕಿ ಬುರ್ಸೊ ಪಾಪಿ ಮಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:15
41 ತಿಳಿವುಗಳ ಹೋಲಿಕೆ  

ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಈ ಉಪದೇಶ ಸತ್ಯವಾದುದು ಹಾಗೂ ನಂಬಲರ್ಹವಾದುದು; ಎಲ್ಲರ ಅಂಗೀಕಾರಕ್ಕೂ ಯೋಗ್ಯವಾದುದು.


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಈ ಮಾತು ನಂಬತಕ್ಕದ್ದಾಗಿದೆ:


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು