Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:16 - ಕನ್ನಡ ಸತ್ಯವೇದವು C.L. Bible (BSI)

16 ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:16
37 ತಿಳಿವುಗಳ ಹೋಲಿಕೆ  

ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.


ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ,


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು