Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:2 - ಕನ್ನಡ ಸತ್ಯವೇದವು C.L. Bible (BSI)

2 ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಕಾ ತಿಮೊತಿ, ವಿಶ್ವಾಸಾತ್ ಹೊತ್ತ್ಯಾ ಮಾಜ್ಯಾ ಖರ್‍ಯಾ ಲೆಕಾ. ಅಮ್ಚೊ ದೆವ್ ಬಾಪ್ ಅನಿ ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ಲಿ ಕುರ್ಪಾ ದಯಾ,ಅನಿ ಶಾಂತಿ ತುಕಾ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:2
18 ತಿಳಿವುಗಳ ಹೋಲಿಕೆ  

ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!


ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.


ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು