Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಜಡೆ ಚಿನ್ನ ಮುತ್ತು ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಸ್ಪಾನ್ ದಿಸ್ತಲೆ ಬರೆ ಕಪ್ಡೆ ಖರ್ಯಾಪಾನಾನ್ ಎಕ್ ಬಾಯ್ಕೊಮನ್ಸಿನ್ ನೆಸ್ತಲೆ ತವ್ಡೆ ನೆಸ್ಲ್ಯಾರ್ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:10
15 ತಿಳಿವುಗಳ ಹೋಲಿಕೆ  

ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ಘನತೆ, ಗೌರವ, ಆಕೆಯ ಬಟ್ಟೆಬರೆ; ಭವಿಷ್ಯತ್ತಿನಲ್ಲಿ ಆಕೆಗೆ ನಿರ್ಭೀತ ನಗೆ.


ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.


ಮಹಿಳೆಯರು ಮೌನದಿಂದಲೂ ನಮ್ರತೆಯಿಂದಲೂ ಧರ್ಮೋಪದೇಶವನ್ನು ಕಲಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು