Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:15 - ಕನ್ನಡ ಸತ್ಯವೇದವು C.L. Bible (BSI)

15 ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೂ ಸ್ತ್ರೀಯರು ಮಾನಸ್ಥೆಯರಾಗಿ ನಂಬಿಕೆಯಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವದರಲ್ಲಿ ರಕ್ಷಣೆಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ವಿಶ್ವಾಸಾತ್, ಪ್ರೆಮಾತ್ ಅನಿ ಪವಿತ್ರಪಾನಾತ್ ಘಟ್ ರ್‍ಹಾಲ್ಯಾರ್, ಎಕ್ ಬಾಯ್ಕೊಮನುಸ್ ಪೊರಾಕ್ನಿ ಜಲಮ್ ದಿತಲ್ಯಾ ವೈನಾ ಬಚಾವ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:15
14 ತಿಳಿವುಗಳ ಹೋಲಿಕೆ  

ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು