Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:2 - ಕನ್ನಡ ಸತ್ಯವೇದವು C.L. Bible (BSI)

2 ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸಗ್ಳ್ಯಾ ರಿತಿನ್ ದೆವಾಕ್ ಬರೆ ದಿಸ್ತಲೆ ಶಾಂತ್ ಅನಿ ಸಮಾದಾನಾಚೆ ಜಿವನ್ ಕರುಕ್ ಹೊಯ್ ಸರ್ಕೆ ರಾಜಾಂಚ್ಯಾ ಅನಿ ಸಗ್ಳ್ಯಾ ಅದಿಕಾರ್‍ಯಾಂಚ್ಯಾಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:2
22 ತಿಳಿವುಗಳ ಹೋಲಿಕೆ  

ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು