1 ತಿಮೊಥೆಯನಿಗೆ 2:7 - ಕನ್ನಡ ಸತ್ಯವೇದವು C.L. Bible (BSI)7 ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ಹೆಚ್ಯಾಚ್ ಸಾಟ್ನಿ ವಿಶ್ವಾಸಾಚಿ ಬರಿ ಖಬರ್ ಅನಿ ಖರೆಪಾನಾಚ್ಯಾ ವಿಶಯಾತ್ ಸಾಂಗುಕ್ ಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತೆಂಕಾ ಸಿಕ್ವುತಲೊ ಅನಿ ಎಕ್ ಅಪೊಸ್ತಲ್ ಕರುನ್ ಮಾಕಾ ಧಾಡಲ್ಲೆ ಹಾಯ್. ಮಿಯಾ ಝುಟೆ ಸಾಂಗಿನಾ ಹೊಲಾ; ಜೆ ಕಾಯ್ ಖರೆ ಹಾಯ್ ತೆಚ್ ಮಿಯಾ ಸಾಂಗುಕ್ ಲಾಗ್ಲಾ! ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.