Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:1 - ಕನ್ನಡ ಸತ್ಯವೇದವು C.L. Bible (BSI)

1 ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳಬೇಕೆಂದಿರುವವನು ಒಳ್ಳೇ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಸಾಂಗ್ತಲಿ ಹಿ ಸಂಗ್ತಿಯಾ ಖರ್ಯಾಚಿ ತಾಂಡ್ಯಾಚೊ ಮುಖಂಡ್ ಹೊವ್ಚೆ ಮನುನ್ ಯವಜ್ತಲೊ ಮಾನುಸ್ ಸಗ್ಳೆ ಕಾಮ್ ಎಗ್ದಮ್ ಬರೆ ಹೊವ್ಚೆ ಮನುನ್ ವಿಶ್ವಾಸ್ ಕರ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:1
19 ತಿಳಿವುಗಳ ಹೋಲಿಕೆ  

ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಈ ಮಾತು ನಂಬತಕ್ಕದ್ದಾಗಿದೆ:


ಈ ಉಪದೇಶ ಸತ್ಯವಾದುದು ಹಾಗೂ ನಂಬಲರ್ಹವಾದುದು; ಎಲ್ಲರ ಅಂಗೀಕಾರಕ್ಕೂ ಯೋಗ್ಯವಾದುದು.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು