Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:11 - ಕನ್ನಡ ಸತ್ಯವೇದವು C.L. Bible (BSI)

11 ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು; ಚಾಡಿ ಹೇಳುವವರಾಗಿರದೆ ಮದ್ಯಾಸಕ್ತಿಯಿಲ್ಲದವರಾಗಿಯೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆಚ್ ಸೆವಕಿಯಾ ಹೊವ್ನ್ ಹೊತ್ತಿ ತೆಂಚ್ಯಾ ಬಾಯ್ಕಾಬಿ ಬರ್‍ಯಾ ಗುನಾಚಿ ರ್‍ಹಾವ್ಚಿ ದುಸ್ರ್ಯಾಂಚಿ ಖಬ್ರಿಯಾ ಬೊಲ್ತಲಿ ರ್‍ಹಾವ್ಚೆ ನ್ಹಯ್; ತೆನಿ ಸಗ್ಳ್ಯಾತ್ ಬರ್‍ಯಾ ಮನಾಚೆ ಅನಿ ಮರ್ಯಾದಿಚೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:11
23 ತಿಳಿವುಗಳ ಹೋಲಿಕೆ  

ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು.


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.


ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.


ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು