Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:16 - ಕನ್ನಡ ಸತ್ಯವೇದವು C.L. Bible (BSI)

16 ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:16
81 ತಿಳಿವುಗಳ ಹೋಲಿಕೆ  

ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ವಿಶ್ವಾಸದ ನಿಗೂಢರಹಸ್ಯಗಳನ್ನು ಶುದ್ಧ ಮನಸ್ಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).


ಆ ದೇವದೂತನು ನನಗೆ ಹೀಗೆ ಹೇಳಿದನು : “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.


ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಹೀಗೆ ದಾವೀದನೇ ಆತನನ್ನು, ‘ನನ್ನ ಪ್ರಭು,’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನು ಆಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು