Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:7 - ಕನ್ನಡ ಸತ್ಯವೇದವು C.L. Bible (BSI)

7 ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಾಂಡ್ಯಾಚ್ಯಾ ಭಾಯ್ರ್ ಹೊತ್ತ್ಯಾ ಲೊಕಾನಿ ಸೈತ್ ಮರ್ಯಾದ್ ದಿತಲೊ ಮಾನುಸ್ ರ್‍ಹಾವ್ಚೊ, ಅಶೆ ಕಸ್ಲ್ಯಾಬಿ ಚುಕೆತ್ ಪಡುನ್ ಗಿರೊ ಪಾಸ್ಯಾತ್ ತೆಕಾ ಪಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:7
21 ತಿಳಿವುಗಳ ಹೋಲಿಕೆ  

ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.


“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.


ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು