1 ತಿಮೊಥೆಯನಿಗೆ 4:13 - ಕನ್ನಡ ಸತ್ಯವೇದವು C.L. Bible (BSI)13 ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಬರುವ ತನಕ ವೇದಪಾರಾಯಣವನ್ನೂ ಪ್ರಸಂಗವನ್ನೂ ಉಪದೇಶವನ್ನೂ ಮಾಡುವದರಲ್ಲಿ ಆಸಕ್ತನಾಗಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಈ ಕಾರ್ಯಗಳನ್ನು ಮಾಡುತ್ತಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಿಯಾ ಯೆಯ್ ಪತರ್, ಲೊಕಾಕ್ನಿ ದೆವಾಚ್ಯಾ ಗೊಸ್ಟಿಯಾ ತೆಂಕಾ ಶಿಕಾಪ್ ಕರ್ ಅನಿ ವಾಚ್ವುನ್, ಅನಿ ಸೊಡ್ಸುನ್ ಸಾಂಗುನ್ಗೆತ್ ರ್‍ಹಾತಲ್ಯಾಕ್ ತುಜೊ ಎಳ್ ಖರ್ಚುಂಗೆತ್ ರ್‍ಹಾ. ಅಧ್ಯಾಯವನ್ನು ನೋಡಿ |
ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.
ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.