Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:1 - ಕನ್ನಡ ಸತ್ಯವೇದವು C.L. Bible (BSI)

1 ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮ್ಹಾತಾರ್ಯಾ ಮಾನ್ಸಾಕ್ ಜೊರ್ ಕರುನಕೊ, ತೆನಿ ತುಜ್ಯಾ ಬಾಬಾ ಸರ್ಕೆ ಮನುನ್ ಚಿಂತುನ್ ತೆಂಚ್ಯಾಕ್ಡೆ ಬರೆ ಕರುನ್ ಬೊಲ್. ದಾಂಡ್ಗ್ಯಾ ಘೊಮನ್ಸಾಕ್ನಿ ತುಜಿ ಭಾವಾ ಮನುನ್ ಚಿಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:1
26 ತಿಳಿವುಗಳ ಹೋಲಿಕೆ  

“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.


ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.


ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು