1 ತಿಮೊಥೆಯನಿಗೆ 5:10 - ಕನ್ನಡ ಸತ್ಯವೇದವು C.L. Bible (BSI)10 ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಿ ಬರಿ ಕಾಮಾ ಕರಲ್ಲಿ ರ್‍ಹಾವ್ಚಿ ಅನಿ ತಿ ಪೊರಾಕ್ನಿ ಬಾಳ್ಗುನ್ ಮೊಟಿ ಕರಲ್ಲಿ, ಸೈಯ್ರ್ಯಾಕ್ನಿ ಬರೆ ಕರುನ್ ಬಗಲ್ಲಿ, ದುಸ್ರ್ಯಾಂಚಿ ಸೆವಾ ಕರಲ್ಲಿ, ದುಸ್ರ್ಯಾ ವಿಶ್ವಾಸಾತ್ ಹೊತ್ಯಾಕ್ನಿ ಮಜತ್ ಕರಲ್ಲಿ, ಅನಿ ಬರೆ ಕರ್‍ತಲ್ಯಾ ಕಾಮಾಸಾಟಿ ಅಪ್ನಾಕುಚ್ ಸೊಡುನ್ ದಿಲ್ಲಿ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |