Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:11 - ಕನ್ನಡ ಸತ್ಯವೇದವು C.L. Bible (BSI)

11 ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ; ಅವರು ಮದಿಸಿ ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಪ್ರಾಯದ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ದಾಂಡ್ಗ್ಯಾ ವಿದವ್ ಬಾಯ್ಕೊಮನ್ಸಾಕ್ನಿ ವಿದವಾಂಚ್ಯಾ ಪಟ್ಟಿತ್ ಘಾಲುನಕೊ, ಕಶ್ಯಾಕ್ ಮಟ್ಲ್ಯಾರ್, ತೆಂಕಾ ನಗಿನ್ ಕರುನ್ ಘೆವ್ಚೆ ಮನುನ್ ಆಶಾ ಯೆಲ್ಯಾರ್ ತೆನಿ ಕ್ರಿಸ್ತಾಚ್ಯಾ ವರ್‍ತಿ ರ್‍ಹಾತಲೆ ಅಪ್ನಾಚೆ ಸರ್ಮಪನ್ ಕರ್‍ತಲೆ ಸೊಡುನ್ ಸೊಡ್ತ್ಯಾತ್ ಅನಿ ಅಪ್ನಾಚ್ಯಾ ಮನಾಚಿ ಕುಶಿ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:11
13 ತಿಳಿವುಗಳ ಹೋಲಿಕೆ  

ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಹೀಗೆ, ಅವರು ಮೊದಲು ಮಾಡಿದ ವಾಗ್ದಾನವನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗುತ್ತಾರೆ.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು