Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:13 - ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದಲ್ಲದೆ ಹರಟೆಮಾತಾಡುವವರೂ ಇತರರ ಕೆಲಸದಲ್ಲಿ ಕೈಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಎಕ್ ಘರಾತ್ನಾ ಅನಿಎಕ್ ಘರಾಕ್ನಿ ಫಿರುನ್ಗೆತ್ ಅಪ್ನಾಚೊ ಎಳ್ ಹಾಳ್ ಕರುಕ್ ಶಿಕ್ತಾತ್; ಅನಿ ನಕ್ಕೊ ಹೊಲ್ಲ್ಯಾ ಗೊಸ್ಟಿಯಾ ಬೊಲುನ್ಗೆತ್ ಅನಿ ನಕ್ಕೊ ಹೊಲ್ಲ್ಯಾ ವಿಶಯಾತ್ನಿ ಟಕ್ಲೆ ಘಾಲುನ್ಗೆತ್ ನಕ್ಕೊ ಹೊಲ್ಲಿ ಕಾಮಾ ಕರಿತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:13
14 ತಿಳಿವುಗಳ ಹೋಲಿಕೆ  

ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.


ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.


ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.


ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು.


ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.


ಹೀಗೆ, ಅವರು ಮೊದಲು ಮಾಡಿದ ವಾಗ್ದಾನವನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು