Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:15 - ಕನ್ನಡ ಸತ್ಯವೇದವು C.L. Bible (BSI)

15 ಏಕೆಂದರೆ, ಈಗಾಗಲೇ ಕೆಲವು ವಿಧವೆಯರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಈಗಾಗಲೇ ಕೆಲವರು ತಮ್ಮ ದಾರಿಯನ್ನು ಬದಲಾಯಿಸಿ ಸೈತಾನನನ್ನು ಹಿಂಬಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಉಲ್ಲ್ಯಾ ಘೊಮರಲ್ಲ್ಯಾ ಬಾಯ್ಕೊಮಾನ್ಸಾ ಬರಿ ವಾಟ್ ಸೊಡುನ್ ಸೈತಾನಾಚ್ಯಾ ಫಾಟ್ನಾ ಜಾವ್ಕ್ ಲಾಗ್ಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:15
12 ತಿಳಿವುಗಳ ಹೋಲಿಕೆ  

ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು