Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:16 - ಕನ್ನಡ ಸತ್ಯವೇದವು C.L. Bible (BSI)

16 ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಂಬುವವಳಾದ ಸ್ತ್ರೀಯ ಅಧೀನದಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆಯೇ ಅವರನ್ನು ಪರಿಪಾಲಿಸಲಿ. ಅವರನ್ನು ನೋಡಿಕೊಳ್ಳುವಂಥ ಜವಾಬ್ದಾರಿಯನ್ನು ಸಭೆಗೆ ಕೊಡಕೂಡದು. ಆಗ ದಿಕ್ಕಿಲ್ಲದ ವಿಧವೆಯರನ್ನು ನೋಡಿಕೊಳ್ಳಲು ಸಭೆಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಜರ್ ಎಕ್ ವಿಶ್ವಾಸಾಚ್ಯಾ ಘರಾಚ್ಯಾ ಘೊಮರಲ್ಲಿ ಬಾಯ್ಕೊಮನ್ಸಿಚೊ ಘೊಮರ್ಲ್ಯಾರ್‍ಬಿ ತಿನಿ ಅಪ್ನಾಚೆ ಘರ್-ದಾರ್ ಬಗುನ್ ಘೆವ್ಚೆ ಸಬೆ ವರ್‍ತಿ ವಜ್ಜೆ ಹೊವ್ನ್ ರ್‍ಹಾವ್ಚೆ ನ್ಹಯ್. ಅಶೆ ತಾಂಡ್ಯಾನ್ ಗತ್‍ ಆದಾರ್ ನಸಲ್ಲ್ಯಾ ಘೊಮರಲ್ಲ್ಯಾ ಬಾಯ್ಕಾಮನ್ಸಾಕ್ನಿ ಮಜತ್ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:16
4 ತಿಳಿವುಗಳ ಹೋಲಿಕೆ  

ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು