1 ತಿಮೊಥೆಯನಿಗೆ 5:21 - ಕನ್ನಡ ಸತ್ಯವೇದವು C.L. Bible (BSI)21 ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ದೆವಾಚ್ಯಾ ಅನಿ ಕ್ರಿಸ್ತ್ ಜೆಜುಚ್ಯಾ ಅನಿ ಪವಿತ್ರ್ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ಮಿಯಾ ತುಕಾ ಹುಕುಮ್ ದಿತಾ. ತುಕಾ ದಿಲ್ಲ್ಯಾ ಗೊಸ್ಟಿಯಾ ಯಾದಿತ್ ಥವ್ನ್ ಘೆ, ಇಚಾರ್ ಕರಿನಸ್ತಾನಾ ಕೊನಾಚಿಬಿ ಚುಕ್ ಮನುನ್ ಸಾಂಗುನಕೊ ಅನಿ ಭೆದ್‍ಭಾವ್ ತರ್ ಬಿಲ್ಕುಲ್ ಕರುಕ್ ಜಾವ್‍ನಕೊ. ಅಧ್ಯಾಯವನ್ನು ನೋಡಿ |