Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:25 - ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ, ಕೆಲವರ ಸತ್ಕಾರ್ಯಗಳು ಎಲ್ಲರಿಗೂ ಬೇಗನೆ ಗೋಚರವಾಗುತ್ತವೆ. ಇನ್ನು ಕೆಲವರ ಸತ್ಕಾರ್ಯಗಳು ಅಗೋಚರವಾಗಿದ್ದರೂ ಸದಾ ಗುಟ್ಟಾಗಿರಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹಾಗೆಯೇ, ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿವೆ. ಇನ್ನು ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿಲ್ಲದಿದ್ದರೂ ಅವು ಮರೆಯಾಗಿರಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಚ್ ಬರ್‍ಯಾ ಕರ್ನ್ಯಾಂಚೆಬಿ ತಸೆಚ್ ಬರಿ ಕಾಮಾ ಎಗ್ದಮ್ ದಿಸುನ್ ಯೆತಾತ್ ಅನಿ ಜೆ ಕೊನಾಕ್‍ ತಿ ದಾಕ್ವುನ್ ದಿವ್ಕ್ ನಕ್ಕೊ, ತೆಕಾಬಿ ತಿ ಧಾಪುನ್ ಥವ್ಕ್ ಹೊಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:25
13 ತಿಳಿವುಗಳ ಹೋಲಿಕೆ  

ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


“ಯಾರೂ ದೀಪವನ್ನು ಹಚ್ಚಿ ನೆಲಮಾಳಿಗೆಯಲ್ಲಾಗಲಿ, ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು