Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:4 - ಕನ್ನಡ ಸತ್ಯವೇದವು C.L. Bible (BSI)

4 ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಎಕ್ ಎಳಾರ್, ಜರ್ ಘೊಮರಲ್ಲ್ಯಾ ಬಾಯ್ಕೊಮನ್ಸಿಕ್ ಪೊರಾ ನಾ ತರ್ ನಾತ್ರಾ ರ್‍ಹಾಲ್ಯಾರ್, ತೆನಿ ಅದ್ದಿ ಅಪ್ನಾಚೆ ದೆವಾಕ್ ಸಮಂದ್‍ ಪಡಲ್ಲೆ ಕಾಮ್ ಸಂಬಾಳುನ್ ಘೆವ್ಕ್ ಅನಿ ಅಪ್ನಾಚ್ಯಾ ಬಾಯ್ ಬಾಬಾಕ್ನಿ ಅನಿ ಅಜ್ಜಾ ಅಜ್ಜಿಕ್ನಿ ಮಜತ್ ಕರುಕ್ ಶಿಕುಂದಿತ್. ಕಶ್ಯಾಕ್ ಮಟ್ಲ್ಯಾರ್ ಹೆಚ್ ದೆವಾಕ್ ಬರೆ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:4
18 ತಿಳಿವುಗಳ ಹೋಲಿಕೆ  

ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.


ಅದನ್ನು ತೆಗೆದುಕೊಂಡು ಊರೊಳಕ್ಕೆ ಹೋಗಿ ತನ್ನ ಅತ್ತೆಗೆ ತೋರಿಸಿದಳು. ಅಂತೆಯೇ ತನ್ನ ಆಹಾರದಿಂದ ಉಳಿಸಿಟ್ಟಿದ್ದನ್ನು ತನ್ನ ಅತ್ತೆಗೆ ಕೊಟ್ಟಳು.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು : “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.


ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.


ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.


ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.


ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು