Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:5 - ಕನ್ನಡ ಸತ್ಯವೇದವು C.L. Bible (BSI)

5 ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಆ ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆಚ್ ಗತ್ ಆದಾರ್ ನಸಲ್ಲಿ ಘೊಮರಲ್ಲಿ ಬಾಯ್ಕೊಮಾನುಸ್ ದೆವಾ ವರ್‍ತಿ ಬರೊಸೊ ಥವ್ತಾ, ಅನಿ ದಿಸ್ ರಾತ್ ಮಾಗ್ನಿ ಕರುನ್ಗೆತ್ ದೆವಾಚಿ ಮಜತ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:5
27 ತಿಳಿವುಗಳ ಹೋಲಿಕೆ  

ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಪ್ರಾಚೀನಕಾಲದ ದೈವಭಕ್ತೆಯರಾದ ಸ್ತ್ರೀಯರು ಹೀಗೆಯೇ ಸಿಂಗರಿಸಿಕೊಂಡು ತಮ್ಮ ತಮ್ಮ ಪತಿಯರಿಗೆ ವಿಧೇಯರಾಗಿದ್ದರು.


ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.


ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ.


ಅಂದರೆ, ನನ್ನ ವಿಶ್ವಾಸದಿಂದ ನೀವೂ ನಿಮ್ಮ ವಿಶ್ವಾಸದಿಂದ ನಾನೂ - ಪರಸ್ಪರ ಪ್ರಯೋಜನವನ್ನು ಪಡೆಯಬೇಕೆಂಬುದೇ ನನ್ನ ಆಶಯ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು