Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:10 - ಕನ್ನಡ ಸತ್ಯವೇದವು C.L. Bible (BSI)

10 ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪೈಸ್ಯಾಂಚೊ ಪ್ರೆಮ್ ಸಗ್ಳ್ಯಾ ಬುರ್ಶ್ಯಾಪಾನಾಚೆ ಮುಳ್. ಹೆ ಜೊಡುನ್ ಘೆತಲ್ಯಾ ಆಶೆಚ್ಯಾ ಕಾರನಾಚ್ಯಾ ವೈನಾ ವಿಶ್ವಾಸಾಚ್ಯಾ ವಾಟೆ ವೈನಾ ಧುರ್ ಗೆಲ್ಯಾತ್ ಅನಿ ಲೈ ಕಸ್ಟಾನಿ ಅಪ್ನಾಚಿ ಮನಾ ಫೊಡುನ್ ಘೆಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:10
49 ತಿಳಿವುಗಳ ಹೋಲಿಕೆ  

ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದ ಮಾರ್ಗವನ್ನು ಬಿಟ್ಟು ತಪ್ಪಿಹೋದಾಗ ಇನ್ನೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ,


ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.


ಅದಕ್ಕೆ ಲಾಬಾನನು, “ಹಿರಿಯ ಮಗಳನ್ನು ಇರಿಸಿಕೊಂಡು ಕಿರಿಯ ಮಗಳನ್ನು ಮದುವೆಮಾಡಿಕೊಡುವುದು ನಮ್ಮ ನಾಡಿನ ಪದ್ಧತಿಯಲ್ಲ.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?" ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?" ಎಂದಳು ಆಕೆ.


ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.


ಅವನು ಕತ್ತೆಗೆ ತಡಿಹಾಕಿಸಿ ತನ್ನ ಗುಲಾಮರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು