Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:11 - ಕನ್ನಡ ಸತ್ಯವೇದವು C.L. Bible (BSI)

11 ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ತಿಯಾ, ದೆವಾಚೊ ಪೊರ್ ಹೊವ್ನ್ ಹಾಸ್, ತಸೆ ಹೊವ್ನ್ ಹ್ಯಾ ಸಗ್ಳ್ಯಾ ಸಂಗ್ತಿಯಾನಿಕ್ನಾ ಧುರ್ ರ್‍ಹಾ ಅನಿ ಬರೆಪಾನಾಚೊ, ದೆವಸ್ಪಾನಾಚಿ ಸೆವಾ ಕರ್‍ತಲೊ, ವಿಶ್ವಾಸಾಚೊ, ಪ್ರೆಮಾಚೊ, ಥಂಡ್‍ಪಾನಾಚೊ, ಅನಿ ಬೊಳೆಪಾನಾಚೊ ಹೊವ್ನ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:11
40 ತಿಳಿವುಗಳ ಹೋಲಿಕೆ  

ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.


ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಇದಲ್ಲದೆ, ಅವನು ಒಂದು ಸಮಾಧಿ ಶಿಲೆಯನ್ನು ಕಂಡು ಅದೇನೆಂದು ವಿಚಾರಿಸಿದನು. ಆ ಊರಿನವರು, “ನೀವು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ್ದ ಜುದೇಯ ನಾಡಿನವನಾದ ದೈವಪುರುಷನ ಸಮಾಧಿ ಇದು,” ಎಂದು ಉತ್ತರಕೊಟ್ಟನು.


ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;


ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;


ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.


ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು.


ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ


ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು