Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:12 - ಕನ್ನಡ ಸತ್ಯವೇದವು C.L. Bible (BSI)

12 ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ವಿಶ್ವಾಸಾಚ್ಯಾ ಖೆಳಾತ್ ತುಜ್ಯಾ ಸಗ್ಳ್ಯಾ ಬರೆಪಾನಾನ್ ಪಳ್, ಅನಿ ತುಕಾಚ್ ತಿಯಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಜಿಕುನ್ ಘೆ; ಹೆಚ್ಯಾಸಾಟಿಚ್ ತುಕಾ ದೆವಾನ್ ಬಲ್ವುಲ್ಯಾನ್, ಲೈ ಸಾಕ್ಷಿಯಾಂಚ್ಯಾ ಫಿಡ್ಯಾತ್ ತಿಯಾ ಹೆ ಲೈ ಬರೆಪಾನ್ ಸ್ವಿಕಾರ್ ಕರಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:12
39 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ನಿಮ್ಮ ಹೋರಾಟವೂ ನಮ್ಮ ಹೋರಾಟವೂ ಒಂದೇ ಆಗಿದೆ. ನಾನು ಕ್ರಿಸ್ತಯೇಸುವಿಗಾಗಿ ಪಟ್ಟ ಕಷ್ಟವನ್ನು ನೀವು ಕಂಡಿದ್ದೀರಿ. ಈಗಲೂ ಅನುಭವಿಸುತ್ತಿದ್ದೇನೆಂದು ಅರಿತಿದ್ದೀರಿ.


ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು