Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:15 - ಕನ್ನಡ ಸತ್ಯವೇದವು C.L. Bible (BSI)

15-16 ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವ್ ತೆಚ್ಯಾ ಸಮಾ ಎಳಾರ್ ತೆಕಾ ಪ್ರಕಟ್ ಕರ್‍ತಾ, ತೊ ಮೊಟ್ಯಾ ಆಶಿರ್ವಾದಾನ್ ಭರಲ್ಲೊ ಎಕ್ಲೊಚ್ ಎಕ್ ಅಧಿಕಾರಿ, ರಾಜಾಂಚೊ ರಾಜಾ ಅನಿ ಧನಿಯಾಂಚೊ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:15
16 ತಿಳಿವುಗಳ ಹೋಲಿಕೆ  

ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಮಹೋನ್ನತ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು