Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:17 - ಕನ್ನಡ ಸತ್ಯವೇದವು C.L. Bible (BSI)

17 ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ಹ್ಯಾ ಜಗಾಚ್ಯಾ ಸಂಗ್ತಿಯಾತ್ನಿ ಸಾವ್ಕಾರ್ ಹಾತ್, ತೆಂಕಾ ಹಂಕಾರಾನ್ ಭರುನಕಾಶಿ, ಸಾವ್ಕಾರ್ಕಿ ಸರ್ಕ್ಯಾ ಉಪ್‍ಯೊಗ್ ನಸಲ್ಲ್ಯಾ ಸಂಗ್ತಿಯಾಂಚ್ಯಾ ವರ್‍ತಿ ತುಮ್ಚೊ ಬರೊಸೊ ಥವ್‍ನಕಾಸಿ, ಅಮ್ಕಾ ಅಮ್ಚ್ಯಾಸಾಟ್ನಿ ಮನುನ್ ಸಗ್ಳೆ ದಿತಲ್ಯಾ ದೆವಾ ವರ್‍ತಿ ಬರೊಸೊ ಥವಾ ಮನುನ್ ಖಡಕ್ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:17
62 ತಿಳಿವುಗಳ ಹೋಲಿಕೆ  

ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.


ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ.


ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ನೀ ನೀಡಲು ಕೂಡಿಸಿಟ್ಟುಕೊಳ್ಳುವುವು I ನೀ ಕೈತೆರೆಯಲು ಸಂತೃಪ್ತಿಪಡುವುವು II


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಪುರಾತನ ಬೆಟ್ಟಗಳಿಂದ ಒದಗುವ ಉತ್ಪನ್ನಗಳಿಂದ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದ.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!


ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು.


ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


“ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ?


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು