Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:5 - ಕನ್ನಡ ಸತ್ಯವೇದವು C.L. Bible (BSI)

5 ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಚುಕಿನಸ್ತಾನಾ ಝಗಡ್ತಲೆ ಹೆ ಸಗ್ಳೆ ಟಕ್ಲೆ ಸಮಾ ಕಾಮ್ ಕರಿನಸಲ್ಲ್ಯಾ, ಖರೆ ಕಾಯ್ ಮನುನ್ ಗೊತ್ತ್ ನಸಲ್ಲ್ಯಾ ಲೊಕಾತ್ನಿ ಘಡುನ್ಗೆತ್ ರ್‍ಹಾತಾ. ತೆನಿ ಧರಮ್ ಮಟ್ಲ್ಯಾರ್ ಸಾವ್ಕಾರ್ ಹೊತಲಿ ಎಕ್ ವಾಟ್ ಮನುನ್ ಚಿಂತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:5
34 ತಿಳಿವುಗಳ ಹೋಲಿಕೆ  

ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ;


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು