Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:6 - ಕನ್ನಡ ಸತ್ಯವೇದವು C.L. Bible (BSI)

6 ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರ ಸೇವೆ ಮಾಡುವವನು ತನ್ನಲ್ಲಿರುವುದರಲ್ಲಿ ಸಂತುಷ್ಟನಾಗಿದ್ದರೆ, ಅವನು ದೊಡ್ಡ ಶ್ರೀಮಂತನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆಬಿ ದೆವಾಚಿ ಸೆವಾ ಕರಲ್ಲ್ಯಾಸಾಟ್ನಿ ಮಾನುಸ್ ಸಾವ್ಕಾರ್ ಹೊತಾ ಅನಿ ಅಪ್ನಾಕ್ಡೆ ಹೊತ್ತ್ಯಾತುಚ್ ತೊ ಖುಶಿನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:6
23 ತಿಳಿವುಗಳ ಹೋಲಿಕೆ  

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.


ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.


ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ವಾಸಕ್ಕೆ ನಾವು ಮನೆಕಟ್ಟುವುದಿಲ್ಲ. ನಮಗೆ ತೋಟವಿಲ್ಲ, ಹೊಲವಿಲ್ಲ, ಬಿತ್ತನೆ ಬೀಜವಿಲ್ಲ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಆದುದರಿಂದ ನಾವು ಜೋರ್ಡನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ದಿಮ್ಮಿಯನ್ನು ಕಡಿದುಕೊಂಡು ಬಂದು ನಮಗೆ ಇರಲು ಒಂದು ಮನೆಯನ್ನು ಕಟ್ಟಿಕೊಳ್ಳೋಣ,” ಎಂದರು. ಅವನು ಅವರಿಗೆ, “ಹೋಗಬಹುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು