Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:9 - ಕನ್ನಡ ಸತ್ಯವೇದವು C.L. Bible (BSI)

9 ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಜೆ ಕೊನ್ ಅಪ್ನಿ ಸಾವ್ಕಾರ್ ಹೊವ್ಚೆ ಮನುನ್ ಚಿಂತಾ, ತೊ ಪರಿಕ್ಷಾತ್ ಪಡ್ತಾ, ಹಾಳ್ ಕರ್‍ತಲೆ ಆಶಾತ್ನಿ ಸಿರ್ಕುನ್ ಪಡ್ತಾತ್, ತೆ ತೆಂಕಾ ನಾಸ್ ಕರ್ತಲ್ಯಾತ್ ಅನಿ ಹಾಳ್ ಕರ್‍ತಲ್ಯಾತ್ ಡಕ್ಲುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:9
42 ತಿಳಿವುಗಳ ಹೋಲಿಕೆ  

ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.


ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.


ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು