Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:1 - ಕನ್ನಡ ಸತ್ಯವೇದವು C.L. Bible (BSI)

1 ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಬಾಬಾಕ್ ಅನಿ ಧನಿಯಾ ಜೆಜು ಕ್ರಿಸ್ತಾಕ್ ಸಮಂದ್‍ ಪಡಲ್ಲ್ಯಾ ಥೆಸಾಲೊನಿಕಾ ಮನ್ತಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಲಿವ್ತಲೆ ಕಾಯ್ ಮಟ್ಲ್ಯಾರ್. ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:1
30 ತಿಳಿವುಗಳ ಹೋಲಿಕೆ  

ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.


ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.


ಮಾನವರಿಂದಾಗಲಿ ಮಾನವ ಅಧಿಕಾರದಿಂದಾಗಲಿ ನಾನು ಪ್ರೇಷಿತನಾಗಿರದೆ ಯೇಸುಕ್ರಿಸ್ತರಿಂದಲೂ ಮತ್ತು ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಪ್ರೇಷಿತನಾಗಿರುತ್ತೇನೆ.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು