Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತ್ಯಾ ದೆವಾಚೊ ಲೆಕ್ ಸರ್‍ಗಾ ವೈನಾ ಯೆತಲಿ ವಾಟ್ ಬಗುನ್ಗೆತ್ ಹಾಸಿ, ತೆಚೊ ಲೆಕ್ ಜೆಜು ಕ್ರಿಸ್ತ್, ತೆಕಾ ತೆನಿ ಮರಲ್ಲ್ಯಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನಾಯ್, ಅನಿ ತೊ ಅಮ್ಕಾ ದೆವಾಚ್ಯಾ ರಾಗಾತ್ನಾ ಬಚಾವ್ ಕರುಕ್ ಯೆವ್ಕ್ ಲಾಗ್ಲಾ ಮನ್ತಲ್ಯಾ ವಿಶಯಾತ್ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:10
46 ತಿಳಿವುಗಳ ಹೋಲಿಕೆ  

ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು