Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:2 - ಕನ್ನಡ ಸತ್ಯವೇದವು C.L. Bible (BSI)

2 ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2-3 ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಂಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ದೆವಾಕ್ ಧನ್ಯವಾದ್ ದಿತಾಂವ್ ಅನಿ ತುಮ್ಚ್ಯಾಸಾಟ್ನಿ ಮಾಗ್ನಿ ಕರ್‍ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:2
10 ತಿಳಿವುಗಳ ಹೋಲಿಕೆ  

ಪ್ರಿಯ ಫಿಲೆಮೋನನೇ, ನಾನು ನಿನಗಾಗಿ ಪ್ರಾರ್ಥಿಸುವಾಗಲೆಲ್ಲಾ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.


ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು