Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:3 - ಕನ್ನಡ ಸತ್ಯವೇದವು C.L. Bible (BSI)

3 ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಚೊ ವಿಶ್ವಾಸ್ ತುಮಿ ಕಸೊ ಸಂಬಾಳುಲ್ಯಾಸಿ, ಕಸೊ ತುಮ್ಚೊ ಪ್ರೆಮ್ ತುಮಿ ಕಸ್ಟಾನಿ ಕಾಮ್ ಕರಿಸರ್ಕೆ ಕರ್‍ತಾ, ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾ ವರ್‍ತಿ ಹೊತ್ತೊ ತುಮ್ಚೊ ಬರೊಸೊ ಕವ್ಡೊ ಘಟ್ ಮನ್ತಲೆ; ಅಮಿ ಅಮ್ಚ್ಯಾ ದೆವಾ ಬಾಬಾಚ್ಯಾ ಇದ್ರಾಕ್ ಯಾದ್ ಕರುನ್ಗೆತ್ ತುಮ್ಚ್ಯಾಸಾಟ್ನಿ ದೆವಾಕ್ ಧನ್ಯವಾದ್ ದಿತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:3
55 ತಿಳಿವುಗಳ ಹೋಲಿಕೆ  

ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ನಿಮಗಾಗಿ ಬಹಳ ಶ್ರಮವಹಿಸಿದ ಮರಿಯಳಿಗೂ ನನ್ನ ನಮಸ್ಕಾರಗಳು.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು :


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು