Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:8
20 ತಿಳಿವುಗಳ ಹೋಲಿಕೆ  

ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.


ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಈಜಿಪ್ಟಿನವರ ಕೈಯಿಂದ ಇಸ್ರಯೇಲರನ್ನು ಬಿಡಿಸಿ ಸರ್ವೇಶ್ವರ ಅವರಿಗೆ ಇಷ್ಟೆಲ್ಲಾ ಉಪಕಾರ ಮಾಡಿದ್ದಕ್ಕಾಗಿ ಇತ್ರೋ ಸಂತೋಷಪಟ್ಟನು.


ಕ್ರಿಸ್ತಯೇಸುವಿನ ಮುಖಾಂತರ ನಮಗೆ ದೇವರಲ್ಲಿ ಇಂಥ ಭರವಸೆ ಇರುವುದರಿಂದಲೇ ಇದನ್ನು ಹೇಳುತ್ತಿದ್ದೇವೆ.


ದೇವರ ವಾಕ್ಯ ನಿಮ್ಮಿಂದ ಹೊರಟಿತೋ? ಅಥವಾ ನಿಮಗೆ ಮಾತ್ರ ತಲುಪಿತೋ?


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು