Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕಶೆ ಜುದೆಯಾತ್ಲ್ಯಾ ಕ್ರಿಸ್ತಾ ಜೆಜು ವರ್ತಿ ವಿಶ್ವಾಸ್ ಕರಲ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಜುದೆವಾನಿ ತರಾಸ್ ದಿಲ್ಯಾನಿ ಅನಿ ತೆನಿ ಕಸ್ಟ್ ಸೊಸ್ಲ್ಯಾನಿ, ತಸೆ ತುಮಿಬಿ ತುಮ್ಚ್ಯಾಚ್ ಲೊಕಾನಿಕ್ನಾ ತರಾಸ್ ಸೊಸ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:14
26 ತಿಳಿವುಗಳ ಹೋಲಿಕೆ  

ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.


ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.


ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.


ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.


ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು