Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:18 - ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕಂದರೆ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೌದು, ನಾವು ನಿಮ್ಮಲ್ಲಿಗೆ ಬರಬೇಕೆಂದಿದ್ದೆವು. ಪೌಲನಾದ ನಾನು, ನಿಜವಾಗಿಯೂ ಅನೇಕ ಸಲ ಬರಲು ಪ್ರಯತ್ನಿಸಿದೆನು, ಆದರೆ ನಮ್ಮನ್ನು ಸೈತಾನನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಪೌಲನಾದ ನಾನಂತೂ ಮತ್ತೆ ಮತ್ತೆ ಬರಲು ಬಯಸಿದೆನು. ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆಚ್ಯಾಸಾಟ್ನಿ ಮಿಯಾ ಪಾವ್ಲು ತುಮ್ಕಾ ಯೆವ್ನ್ ಭೆಟುಚೆಚ್ ಮನುನ್ ಲೈ ಖಟ್ಪಟ್ಲೊ, ಖರೆ ಸೈತಾನಾನ್ ಮಾಕಾ ಯೆವ್ಕುಚ್ ಸೊಡುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:18
13 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರಲು ಅನೇಕ ಸಾರಿ ಮಾಡಿದ ಪ್ರಯತ್ನಗಳು ವಿಫಲವಾದವು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ.


ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!


ಪೌಲನಾದ ನಾನು ನನ್ನ ಸ್ವಂತ ಕೈಬರಹದಿಂದ ನಿಮಗೆ ವಂದನೆಯನ್ನು ಬರೆಯುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು