Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:19 - ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಆಕ್ರಿಕ್, ತುಮಿ ಹುರಲ್ಲ್ಯಾ ಸಗ್ಳ್ಯಾಂಚ್ಯಾನ್ಕಿ ಖಾಯ್ಲೆ ನ್ಹಯ್, ಧನಿ ಜೆಜು ಪರ್ತುನ್ ಯೆತಾನಾ ತೆಚ್ಯಾ ಇದ್ರಾಕ್ ಅಮಿ ಬೊಲ್ತಲೊ ಅಮ್ಚೊ ಬರೊಸೊ, ಅಮ್ಚಿ ಕುಶಿ, ಅನಿ ಜಿಕುನ್ ಘೆಟಲ್ಲ್ಯಾ ಮುಕುಟಾಕ್ ಕಾರನ್ ತುಮಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:19
35 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;


ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.


ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.


ನಿಶ್ಚಯವಾಗಿ ನಮ್ಮ ಗೌರವವೂ ಆನಂದವೂ ನೀವೇ.


ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು.


ಅಂದದ ಪುಷ್ಪಮಾಲೆಯನ್ನು ಹಾಕುವಳು ನಿನ್ನ ಕೊರಳಿಗೆ, ಸುಂದರ ಕಿರೀಟವನ್ನು ಮುಡಿಸುವಳು ನಿನ್ನ ತಲೆಗೆ.”


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.


ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು