Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆಂದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿಂದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೆಚ್ಯಾ ಬದ್ಲಾಕ್, ಕನ್ನಾಬಿ ದೆವಾಕ್ ಕಾಯ್ ಪಾಜೆ ತೆ ಅಮಿ ಬೊಲ್ಲಾಂವ್, ಕಶ್ಯಾಕ್ ಮಟ್ಲ್ಯಾರ್, ತೆನಿ ಅಮ್ಚಿ ಪರಿಕ್ಷಾ ಕರುನ್ ಬಗುನ್, ಅಮಿ ಖಾತ್ರಿಚಿ ಮಾನ್ಸಾ ಮನುನ್ ಅಪ್ನಾಚಿ ಬರಿ ಖಬರ್ ತೆನಿ ಅಮ್ಚ್ಯಾ ತಾಬೆತ್ ದಿಲ್ಯಾನಾಯ್, ಅಮಿ ಮಾನ್ಸಾಂಚ್ಯಾ ಮನಾಕ್ ಬರೆ ದಿಸುಕ್ ನ್ಹಯ್, ಅಮ್ಚಿ ಮನಾ ತಪಾಸುನ್ ಬಗ್ತಲ್ಯಾ ದೆವಾಚ್ಯಾ ಮನಾಕ್ ಬರೆ ದಿಸ್ತಲೆ ಕರ್‍ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:4
38 ತಿಳಿವುಗಳ ಹೋಲಿಕೆ  

ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.


ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.


ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು?


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು