Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಝುಟ್ಯಾ ಗೊಸ್ಟಿಯಾನಿ ಮಳ್ಳ್ ಕರುಕ್, ನಾ ಹೊಲ್ಯಾರ್, ಪೈಸ್ಯಾಂಚಿ ಆಶಾ ಕರುನ್ ನಾಟಕ್ ಕರುನ್ ದಾಕ್ವುಕ್ ಮನುನ್ ಯೆಲ್ಲೆ ನಾವ್, ದೆವುಚ್ ಹೆಕಾ ಸಗ್ಳ್ಯಾಕ್ ಸಾಕ್ಷಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:5
34 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಹಾಗೇನಾದರೂ ವಂಚಿಸಿದ್ದುಂಟೇ?


ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.


ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.


ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು