Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:4 - ಕನ್ನಡ ಸತ್ಯವೇದವು C.L. Bible (BSI)

4 ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆ ಆಯಿತು, ನಿಮ್ಮ ಅನುಭವಕ್ಕೂ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿಂಸೆಯನ್ನು ಅನುಭವಿಸಬೇಕಾಗುತ್ತದೆಯೆಂದು ನಿಮಗೆ ತಿಳಿಸಿದೆವು. ನಾವು ಹೇಳಿದಂತೆಯೇ ಅದು ಸಂಭವಿಸಿತು ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಕಾ ಕಸ್ಟ್ ಸೊಸ್ತಲೆ ಪಡ್ತಾ ಮನುನ್, ಅಮಿ ತುಮ್ಕಾ ಅದ್ದಿಚ್ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾಚ್ ಸಾಂಗಟಲ್ಲಾಂವ್, ಅನಿ ತಸೆಚ್ ತುಮ್ಕಾ ಗೊತ್ತ್ ಹೊತ್ತ್ಯಾ ಸಾರ್ಕೆ ಅತ್ತಾ ಚಲುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:4
12 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.


ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.


ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು