Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:5 - ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚೆಸಾಟ್ನಿ ಮಿಯಾ ಲೈ ಎಳ್ ರಾಕುಕ್ ಹೊಯ್ನಾ. ತೆಚೆಸಾಟ್ನಿ ತುಮ್ಚೊ ವಿಶ್ವಾಸ್ ಕಳ್ವುನ್ ಘೆವ್ಚೆ ನ್ಹಯ್ ಮನುನ್ ತಿಮೊತಿಕ್ ತುಮ್ಚಾಕ್ಡೆ ಧಾಡುನ್ ದಿಲೊ, ಅಶೆ ಹೊವ್ನ್ ಸೈತಾನಾಚ್ಯಾ ಪಾಸಾತ್ ಪಡುನ್ ಅಮ್ಚೆ ಸಗ್ಳೆ ಕಾಮ್ ಹಾಳ್ ಹೊಯ್ ನಸ್ತಾನಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:5
20 ತಿಳಿವುಗಳ ಹೋಲಿಕೆ  

ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.


ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು